ರಾಜ್ಯ

ತೈಲ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಸೈಕಲ್ ಜಾಥಾ 

ತೈಲ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ  ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಂದು ನಗರದ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ನಾಯಕರು ಸೈಕಲ್ ಜಾಥಾ ಹಮ್ಮಿಕೊಂಡಿದ್ದು ಇದಕ್ಕೆ ಅವಕಾಶ ಮಾಡಿಕೊಡದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ಸೈಕಲ್ ಜಾಥಾ ಆರಂಭಿಸಲಾಯಿತು. ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್ ಏರಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಾಯಕರು ಮುಂದಾದರು. ಆದರೆ ಬಿಜೆಪಿ ಕಚೇರಿ ಮುಂಭಾಗದಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.

Leave a Reply

Your email address will not be published. Required fields are marked *

error: Content is protected !!