ಪೆರ್ನೆ: ಮಲಗಿದ್ದಲ್ಲೇ ಮಹಿಳೆಯನ್ನು ಕೊಲೆಗೈದ ಪ್ರಕರಣ: ಆರೋಪಿ ರಿಮಾಂಡ್ ಹೋಮ್ ಗೆ
ಸಮೀಪದ ಪೆರ್ನೆ ಗ್ರಾಮ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಅವರನ್ನು ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳವರೆಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ.
ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದ್ದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರು.
ಆಗ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿರುವುದರಿಂದ ಆರೋಪಿಯನ್ನು ಬಂಧಿಸಲಾಗಿತ್ತು.