ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕಾಂಪ್ಲೆಕ್ಸ್ ನಲ್ಲಿರುವ ಮಳಿಗೆಗಳು ಹೊತ್ತಿ ಉರಿಯುತ್ತಿದೆ. ಸ್ಥಳದಲ್ಲಿರುವವರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆಯಾದರೂ ಬೆಂಕಿ ವೇಗವಾಗಿ ಹರಡುತ್ತಿರುವ ಕಾರಣ ನಂದಿಸಲು ಸಾಧ್ಯವಾಗುತ್ತಿಲ್ಲ. ಅಗ್ನಿ ಅವಘಡ ಸಂಭವಿಸಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ.