ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಪಕ್ಷದ ಎಂಎಲ್‌ಸಿ ಸೂರಜ್ ರೇವಣ್ಣರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಇಂದು ಬೆಳಿಗ್ಗೆ ಹಾಸನದ ಸೆನ್ ಠಾಣೆ ಪೊಲೀಸರು ಸೂರಜ್ರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಸೂರಜ್ನನ್ನು ಹಾಜರುಪಡಿಸಲಾಗಿತ್ತು.