ಬೆಳ್ತಂಗಡಿ: ರಸ್ತೆಯ ಕೆಸರಿನಲ್ಲಿ ಕುಳಿತು ವಿನೂತನ ಪ್ರತಿಭಟನೆ
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ನಿಂತು ಕೆಸರಿನಿಂದಾಗಿ ವಾಹನ ಸಂಚಾರಕ್ಕೆ ತೊಡಕ್ಕಾಗಿದೆ. ಇದರಿಂದ ಆಕ್ರೋಶಗೊಂಡು ಉಜಿರೆ ಅನುಗ್ರಹ ಶಾಲೆಯ ಬಳಿ ಕೆಸರಿನಲ್ಲಿಯೇ ಪ್ರತಿಭಟನೆ ನಡೆದಿದೆ.

ಉಜಿರೆಯ ಪ್ರವೀಣ್ ಮತ್ತೀತರರು ಮಧ್ಯಾಹ್ನ ನಡು ರಸ್ತೆಯಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸಿದರು. ತಕ್ಷಣ ವಾಹನ ಸವಾರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.