ಬಿರಿಯಾನಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ ಚಿಕನ್ ಪೀಸ್: ಉಸಿರುಗಟ್ಟಿ ವ್ಯಕ್ತಿ ಸಾವು
ಬಿರಿಯಾನಿ ತಿನ್ನುವಾಗ ಗಂಟಲಲ್ಲಿ ಚಿಕನ್ ಪೀಸ್ ಸಿಲುಕಿದ ಪರಿಣಾಮ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಹೈದರಾಬಾದ್ ನ ಶಾದ್ ನಗರದ ಅಣ್ಣಾರಾಮ್ ಗ್ರಾಮದ ನಿವಾಸಿಯೊಬ್ಬರು ಬಾರ್‌ಗೆ ಹೋಗಿ ಮದ್ಯ ಸೇವಿಸಿ ಬಳಿಕ ಚಿಕನ್ ಬಿರಿಯಾನಿ ತಿಂದಿದ್ದಾರೆ ಈ. ಆ ಸಂದರ್ಭದಲ್ಲಿ ಅವರಿಗೆ ಉಸಿರುಗಟ್ಟಿದಂತಾಗಿ ತಕ್ಷಣ ಬಾರ್‌ನಿಂದ ಹೊರ ಬಂದಿದ್ದಾರೆ. ತೀವ್ರ ಉಸಿರಾಟದ ತೊಂದರೆಯುಂಟಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಶ್ರೀಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೂ ಮುನ್ನವೇ ಅವರು ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಪತ್ತೆಯಾಗಿದೆ ಎಂದು ವರದಿಯಾಗಿದೆ.