ಟಿ20 ಕ್ರಿಕೆಟ್: ಹೊಸ ದಾಖಲೆ ನಿರ್ಮಿಸಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ
ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 200 ಸಿಕ್ಸರ್ ಬಾರಿಸಿದ ಮೊದಲ ಕ್ರಿಕೆಟಿಗನೆಂಬ ದಾಖಲೆಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಭಾಜನರಾಗಿದ್ದಾರೆ.

ಜೂ.24ರಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮ ಅವರು 8 ಸಿಕ್ಸರ್ ಗಳನ್ನು ಸಿಡಿಸಿ 92 ರನ್ ಬಾರಿಸಿದ್ದರು. ಅಲ್ಲದೇ ಆಸ್ಟ್ರೇಲಿಯ ವಿರುದ್ಧ 132 ಸಿಕ್ಸರ್ ಬಾರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಂಡವೊಂದರ ವಿರುದ್ಧ ಅತ್ಯಧಿಕ ಸಿಕ್ಸರ್ ಹೊಡೆದ ಆಟಗಾರನೆನಿಸಿದರು.
ರೋಹಿತ್ ತಮ್ಮ 92 ರನ್ನುಗಳ ಸೊಗಸಾದ ಬ್ಯಾಟಿಂಗ್ ವೇಳೆ 8 ಸಿಕ್ಸರ್, 7 ಬೌಂಡರಿ ಹೊಡೆದರು. 2007ರ ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಯುವರಾಜ್ ಸಿಂಗ್ 7 ಸಿಕ್ಸರ್ ಬಾರಿಸಿದ ದಾಖಲೆ ಪತನಗೊಂಡಿತು.