ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸುಬ್ರಹ್ಮಣ್ಯಕ್ಕೆ ಆಗಮನ
ಸುಳ್ಯ: ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಅವರ ಕುಟುಂಬ ಸಮೇತ ಇಂದು (ಜೂ.25) ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.
ದೇವಳಯದಲ್ಲಿ ಮಧ್ಯಾಹ್ನದ ಮಹಾಪೂಜೆಯಲ್ಲಿ ಶಿವಕುಮಾರ್ ಕುಟುಂಬ ಪಾಲ್ಗೊಳ್ಳಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರುಡಿಕೆ ಶಿವಕುಮಾರ್ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಡಿಕೆಶಿ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.