ಜೂನ್ 28ರಿಂದ ಕುಂಬ್ರ ಸಿಟಿ ಬಸ್ ಆರಂಭ: ವಲಯ ಕಾಂಗ್ರೆಸ್, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಶಾಸಕ ಆಶೋಕ್ ರೈ
ಪುತ್ತೂರು: ಪುತ್ತೂರಿನಿಂದ ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಜೂ. 28 ರಿಂದ ಆರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಬೆಳಿಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತೆರಳುವಲ್ಲಿ ಬಸ್ ಸಮಸ್ಯೆಯಾಗುತ್ತಿದ್ದು ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಮಾಡಿದರೆ ಪುತ್ತೂರು ನಗರದ ಆಸುಪಾಸಿನ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.

ಕೆಲವು ವರ್ಷಗಳ ಹಿಂದೆ ಇದ್ದ ಸಿಟಿ ಬಸ್ ವ್ಯವಸ್ಥೆಯನ್ನು ರದ್ದು ಮಾಡಲಾಗಿದ್ದು ಪುನರಾರಂಭ ಮಾಡುವಂತೆ ಒಳಮೊಗ್ರು ವಲಯ ಕಾಂಗ್ರೆಸ್ ಸಮಿತಿಯಿಂದ ಹಾಗೂ ವಿದ್ಯಾರ್ಥಿಗಳು ಶಾಸಕರಿಗೆ ಮನವಿ ಮಾಡಿದ್ಧರು. ಪ್ರಾಯೋಗಿಕವಾಗಿ ಕಳೆದ ಮೂರು ದಿನಗಳ ಹಿಂದೆ ಸಿಟಿ ಬಸ್ ಸಂಚಾರ ಮಾಡಿದ್ದು ಜೂ.28 ರಿಂದ ಬಸ್ ಆರಂಭಗೊಳ್ಳಲಿದೆ ಎಂದು ಶಾಸಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಂಕಷ್ಟವನ್ನು ಅರಿತ ಶಾಸಕರು ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಮಾಡಿದ್ದು ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಮತ್ತು ಜೂ.28 ರಂದು ಕುಂಬ್ರದಲ್ಲಿ ಸಿಟಿ ಬಸ್ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿ ತಿಳಿಸಿದ್ದಾರೆ.