ಮಂಗಳೂರು: ದಕ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜೂನ್ 27 (ಗುರುವಾರ)ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆಗಳಿಗೆ ರಜೆ ಘೋಷಿಸಿದ್ದರು. ಇದೀಗ ಮಳೆ ಮುಂದುವರಿದಿದ್ದು ಜೂ.28 ಶುಕ್ರವಾರ ಕೂಡಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.