ಸರ್ಕಾರಿ ಉದ್ಯೋಗ: ಖಾಲಿ ಇರುವ ಹುದ್ದೆ ಭರ್ತಿ ಮಾಡಿ
ವರ್ಷದಿಂದ ವರ್ಷಕ್ಕೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಕೆಲವು ಪದವೀಧರ ವಿದ್ಯಾರ್ಥಿಗಳು ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆಯುತ್ತಾರೆ. ಹಲವು ವಿದ್ಯಾರ್ಥಿಗಳು ಇತ್ತ ಉದ್ಯೋಗ ಇಲ್ಲದೆ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ.
ಹಲವು ಸರ್ಕಾರಿ ಕಛೇರಿಗಳನ್ನು ಗಮನಿಸಿದಾಗ ಎಲ್ಲಾ ಕಡೆಯೂ ನೌಕರರ ಕೊರತೆ ಇದೆ. ಆದರೂ ಯಾಕಾಗಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಮಾಡುತ್ತಿಲ್ಲ.? ಬಡ ಮತ್ತು ಮಧ್ಯಮ ವರ್ಗದ ಕುಟುಂಬದಲ್ಲಿನ ಯುವಕ/ಯುವತಿಯರು ವಿದ್ಯಾವಂತರಾಗಿ ಯಾವುದೇ ಉದ್ಯೋಗ ಇಲ್ಲದೆ ಮನೆಯಲ್ಲಿ ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ. ದಯಮಾಡಿ ಸರ್ಕಾರದಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ನಿವಾರಣೆ ಮಾಡಿ. -ಝೈನು ಆಲಂಕಾರು
ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ
ದಕ್ಷಿಣ ಕನ್ನಡ ಜಿಲ್ಲೆ