ಕ್ರೈಂಜಿಲ್ಲೆ

ಭೀಕರ ಅಪಘಾತ: 13 ಮಂದಿ ಸಾವು



ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು 13 ಮಂದಿ  ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದ್ದು ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಮೃತಪಟ್ಟವರು ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!