ರಾಜಕೀಯರಾಷ್ಟ್ರೀಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ



ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಮಾತುಕತೆ ನಡೆಸಿದರು.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದರು. ಅಲ್ಲದೇ ಇನ್ನಿತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆಸಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!