ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಹೇಳಿಕೆ: ಖಡಕ್ ವಾರ್ನಿಂಗ್ ನೀಡಿದ ಡಿಕೆಶಿ
ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ವಿಚಾರದಲ್ಲಿ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಹೆಚ್ಚುವರಿ ಡಿಸಿಎಂ ಸೃಷ್ಟಿ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.