ಅಂತಾರಾಷ್ಟ್ರೀಯಕ್ರೀಡೆರಾಜಕೀಯರಾಷ್ಟ್ರೀಯ

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅಭಿನಂದನೆ

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಿ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತಂದಿರುವುದು ನಮಗೆ ಹೆಮ್ಮೆ ತಂದಿದೆ, ಈ ಗೆಲುವು ಪ್ರತಿಯೊಬ್ಬ ಭಾರತೀಯನ ದೊಡ್ಡ ವಿಜಯವಾಗಿದೆ. ಭಾರತೀಯ ಆಟಗಾರರು ವಿಶ್ವಕಪ್ ಟ್ರೋಫಿ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದ್ದಾರೆ. ಒಂದೇ ಒಂದು ಪಂದ್ಯವನ್ನು ಸೋಲದೆ ಈ ದಿಗ್ವಿಜಯವನ್ನು ಸಾಧಿಸಿದ್ದೀರಿ ಎಂದು ಮೋದಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.

ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ.
ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಟೀಂ ಇಂಡಿಯಾಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೇಶದ ಎಲ್ಲ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!