ನಡು ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ
ಮಳೆಗೆ ದೈತ್ಯ ಮೊಸಳೆಯೊಂದು ನಡು ರಸ್ತೆಯಲ್ಲಿ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್‌ನಲ್ಲಿರುವ ಮುಖ್ಯ ರಸ್ತೆಯಲ್ಲಿ ಈ ದೃಶ್ಯ ಕಂಡುಬಂದಿದೆ.

ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಇಲ್ಲಿರುವ ನದಿಯಿಂದ ಮೊಸಳೆ ರಸ್ತೆಗೆ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷವಾದ ಸುದ್ದಿ ಹರಡುತ್ತಿದ್ದಂತೆ ಇಲ್ಲಿನ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಮಳೆಗಾಲದಲ್ಲಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ ಕೂಡಲೇ ನದಿಯಿಂದ ಮೊಸಳೆಗಳು ರಸ್ತೆಗೆ ಬರುತ್ತದೆ ಎಂದು ಸ್ಥಳೀಯರು ಹೇಳಿಕೊಂಡಿರುವುದಾಗಿ ವರದಿಯಾಗಿದೆ.