ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳಗೊಂಡಿದ್ದು ನಗರದ 27 ವರ್ಷದ ಯುವಕ ಈ ಮಹಾಮಾರಿಗೆ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ 1900 ಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ನಿನ್ನೆ ಒಂದೇ ದಿನ ನಗರದಲ್ಲಿ 65 ಪ್ರಕರಣ ಪತ್ತೆಯಾಗಿದೆ. ಈ ಹಿನ್ನಲೆ ಈಗಾಗಲೇ ಪಾಲಿಕೆ ಡೆಂಗ್ಯೂ ನಿಯಂತ್ರಣಕ್ಕೆ ಸಜ್ಜಾಗಿದೆ.