ಉತ್ತರ ಪ್ರದೇಶ: ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತಕ್ಕೆ 103 ಮಂದಿ ಸಾವು
ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ಕಾಲ್ತುಳಿತದಲ್ಲಿ 103 ಮಂದಿ ಸಾವಿಗೀಡಾಗಿದ್ದಾರೆ. ಹಾಥರಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭನ್‌ಪುರ್ ಗ್ರಾಮದಲ್ಲಿ ಹಾಕಲಾದ ಟೆಂಟ್‌ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
‘ಸತ್ಸಂಗ’ದಲ್ಲಿ ಭಾಗವಹಿಸಿದ್ದ ಜನರಲ್ಲಿ ಹಲವಾರು ಮಂದಿ ಉಸಿರುಗಟ್ಟಿ ಅಸ್ವಸ್ಥತೆಗೆ ಕಾರಣವಾಗಿದ್ದು ಆಗ ಜನರು ಹೊರಗೆ ಓಡಲು ಆರಂಭಿಸಿದ್ದರಿಂದ ಕಾಲ್ತುಳಿತ ಉಂಟಾಯಿತು ಎಂದು ತಿಳಿದು ಬಂದಿದೆ.