ಹತ್ರಾಸ್: ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 121ಕ್ಕೆ ಏರಿಕೆ, 28 ಮಂದಿಗೆ ಗಾಯ
ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರ ಪೈಕಿ 19 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಉತ್ತರ ಪ್ರದೇಶ ಪೊಲೀಸರು ಘಟನೆ ಸಂಬಂಧ FIR ದಾಖಲಿಸಿದ್ದಾರೆ.

7 ಮಕ್ಕಳು ಹಾಗೂ ಓರ್ವ ಪುರುಷನನ್ನು ಹೊರತುಪಡಿಸಿದರೆ, ಮೃತಪಟ್ಟವರೆಲ್ಲರೂ ಮಹಿಳೆಯರೇ ಆಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.