ಕರಾವಳಿರಾಷ್ಟ್ರೀಯ

 ಕೇಂದ್ರ ಸಚಿವ ನಿತಿನ್ ಗಡ್ಕರಿ‌ ಭೇಟಿಯಾದ ದ.ಕ ಸಂಸದ ಬ್ರಿಜೇಶ್ ಚೌಟ



ನವದೆಹಲಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ‌ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರವಾಗಿ ಸಚಿವರ ಜೊತೆ ಸಂಸದರು ಚರ್ಚೆ ನಡೆಸಿದರು.

ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು – ಬೆಂಗಳೂರು ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಸಂಸದ ಬ್ರಿಜೇಶ್ ಚೌಟ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!