ಬೆಳ್ತಂಗಡಿ: ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.
ಭಾರಿ ಮಳೆ ಜುಲೈ 4ರಂದೂ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ರಜೆ ನೀಡಿದ್ದಾರೆ.