ಡೆಂಗ್ಯೂ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಮುಂಜಾಗ್ರತೆ ವಹಿಸಿ: ದಿನೇಶ್ ಗುಂಡೂರಾವ್
ಡೆಂಗ್ಯೂ ನಿಯಂತ್ರಣ ಕ್ರಮಗಳ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಅವರಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಡಿ.ಸಿ, ಸಿಇಒ ಹಾಗೂ ಸ್ಥಳೀಯ ಪಾಲಿಕೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಡೆಂಗ್ಯೂ ಹಾಟ್ ಸ್ಪಾಟ್ಗಳನ್ನ ಪತ್ತೆ ಹಚ್ಚಿ ಮುಂಜಾಗೃತ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದ್ದಾರೆ.