ಕರಾವಳಿ

ಅಡಿಕೆ‌ ಹಳದಿ ಹಾಗೂ ಕೊಳೆ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ: ಅಶೋಕ್ ರೈ




ಪುತ್ತೂರು: ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಹಾಗೂ ಕೊಳೆ ರೋಗ ಬಂದಿದೆ, ಯಾವುದೇ ಔಷಧಿ ಸಿಂಪಡನೆ‌ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಮೂರಾಬಟ್ಟೆಯಾಗಲಿದೆ ಎಂದು‌ ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಗಮನ ಸೆಳೆದರು.


ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಡರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದರು.

ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನು‌ ಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಾಣಿಸಿಕೊಂಡಿದೆ ಎಂದು‌ ಶಾಸಕರು‌ ಸಭೆಯ ಗಮನಕ್ಕೆ ತಂದರು.
ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!