ಅಜಿಲಮೊಗರು: ಮೀನು ಹಿಡಿಯುವ ವೇಳೆ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57ವ) ಅವರ ಮೃತದೇಹ ಜು.5ರಂದು ನದಿಯಲ್ಲಿ ಪತ್ತೆಯಾಗಿದೆ.
ಅಜಿಲಮೊಗರು ಕೂಟೇಲು ಸೇತುವೆ ಬಳಿ ಕಿಂಡಿ ಅಣೆಕಟ್ಟಿನಲ್ಲಿ ಕುಳಿತು ಮೀನು ಹಿಡಿಯುತ್ತಿದ್ದ ಮೈಕಲ್ ಆಯತಪ್ಪಿ ನೀರಿಗೆ ಬಿದ್ದಿದ್ದರು.
ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನದಿಯಲ್ಲಿ ಹುಡುಕುವ ಪ್ರಯತ್ನ ನಡೆಸಿದ್ದರು. ಆದರೆ ಮೃತದೇಹ ಸಿಕ್ಕಿರಲಿಲ್ಲ. ಜೂನ್ 5ರಂದು ಬೆಳಿಗ್ಗೆ ನೇತ್ರಾವತಿ ನದಿಯಲ್ಲಿ ನೀರು ಇಳಿಕೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ ಐ ಹರೀಶ್ ಮತ್ತು ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.