ಕರಾವಳಿ

ದ.ಕ ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿಯಾಗಿ ಯತೀಶ್ ಎನ್ ಅಧಿಕಾರ ಸ್ವೀಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿಯಾಗಿ ಯತೀಶ್ ಎನ್ ಅವರು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರುಗೆ ವರ್ಗಾವಣೆಯಾಗಿದ್ದರು.

2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!