ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜಗದೀಶ್ ಶೆಟ್ಟರ್ ಆಗ್ರಹ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಳಿಕ ಮುಡಾ ಹಗರಣ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ವಿಚಾರವಾಗಿ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರು ಮುಡಾ ಹಗರಣದಲ್ಲಿ ಸಿಎಂ ನೇರವಾಗಿ ಭಾಗಿಯಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಅತೀ ಹೆಚ್ಚು ದುರುಪಯೋಗ ಮುಡಾದಲ್ಲಿ ಆಗಿದೆ. ಸಿಬಿಐಗೆ ಕೊಟ್ಟರೆ ಸಾವಿರಾರು ಕೋಟಿ ರೂ. ಹಗರಣ ಹೊರಗೆ ಬರುತ್ತದೆ ಎಂದು ಹೇಳಿದ್ದಾರೆ.