ಕಡಬ: ನದಿ ನೀರಿಗೆ ಧುಮುಕಿದ ಯುವಕ
ಕಡಬ: ಯುವಕನೊಬ್ಬ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿಕೊಂಡು ಸಹಾಯಕ್ಕಾಗಿ ಅಂಗಲಾಚುತ್ತಿರುವ ದೃಶ್ಯ ಜೂನ್ 8ರಂದು ಬೆಳಿಗ್ಗೆ ಇಲ್ಲಿನ ಪುಳಿಕುಕ್ಕು ಎಂಬಲ್ಲಿ ವರದಿಯಾಗಿದೆ.

ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ ನದಿಯ ನಡುವೆ ಇರುವ ಪೊದೆಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಪುಳಿಕುಕ್ಕು ಸೇತುವೆ ಬಳಿಯ ಬಸ್ ತಂಗುದಾಣದಲ್ಲಿ ಬ್ಯಾಗ್ ಪತ್ತೆಯಾಗಿದ್ದು ಇದೇ ವ್ಯಕ್ತಿಯ ಬ್ಯಾಗ್ ಆಗಿರಬಹುದೇ ಎನ್ನುವ ಸಂಶಯ ಉಂಟಾಗಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು
ಅಗ್ನಿಶಾಮಕ ದಳದ ಸಿಬಂದಿಗಳು ಯುವಕನನ್ನು ರಕ್ಷಿಸುವ ಕಾರ್ಯಾಚರಣೆಗೆ ಇಳಿದಿದ್ದು ಯುವಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.