ಅನರ್ಹರ ಬಿ.ಪಿ.ಎಲ್. ಕಾರ್ಡ್ ರದ್ದು..! ಅರ್ಹರಿಗೆ ಬಿಪಿಎಲ್ ಕಾರ್ಡ್
ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಸರಕಾರ ಶಾಕ್ ಕೊಟ್ಟಿದೆ. ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅದನ್ನು ಪತ್ತೆ ಹಚ್ಚಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ವರದಿಯಾಗಿದೆ.
ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಜೊತೆಗಿನ ಸಭೆಯಲ್ಲಿ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ರಾಜ್ಯದಲ್ಲಿ ಶೇ.80 ರಷ್ಟು ಜನರು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.