ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಭೀಕರ ಅಪಘಾತ, 18 ಮಂದಿ ಸಾವು
ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಸ್ಲೀಪರ್ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಅದೇ ವೇಳೆ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.