ಜು.13: ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ
ಪುತ್ತೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿಯವರ ವಿರುದ್ದ ಪುತ್ತೂರಿನಲ್ಲಿ ಶಾಸಕ ಅಶೋಕ್‌ಕುಮಾರ್ ರೈಯವರ ನೇತೃತ್ವದಲ್ಲಿ ಬೃಹತ್
ಪ್ರತಿಭಟನಾ
ಸಭೆ
ಜುಲೈ 13ರಂದು ಅಮರ್ ಜವಾನ್ ಜ್ಯೋತಿ ಸ್ಮಾರಕ ಬಳಿ ನಡೆಯಲಿದೆ.

ಪುತ್ತೂರು ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಎಂ.ಬಿ.ವಿಶ್ವನಾಥ ರೈ ಹಾಗೂ ಡಾ.ರಾಜಾರಾಮ್ ಕೆ.ಬಿ. ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ
ತಿಳಿಸಿದ್ದಾರೆ.