ರಾಜ್ಯ ಸರಕಾರದ ವಿರುದ್ಧ ಆರ್ ಅಶೋಕ್ ಆಕ್ರೋಶ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಲೂಟಿ ಮಾಡುವುದರಲ್ಲೇ ತೊಡಗಿದ್ದು ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳು ಈ ಸರ್ಕಾರಕ್ಕೆ ಎರಡು ಕಪ್ಪು ಚುಕ್ಕೆಗಳು ಇದ್ದಂತೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಒಂದು ಮುಡಾ ಹಗರಣ, ಇನ್ನೊಂದು ವಾಲ್ಮೀಕಿ ನಿಗಮ ಹಗರಣ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ಕಾರ್ಯ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೇ ಬರೀ ಲೂಟಿ ಮಾಡುವುದಷ್ಟೇ ಕೆಲಸ ಆಗಿದೆ ಎಂದು ಅವರು ಟೀಕಿಸಿದ್ದಾರೆ.