ಆರೋಗ್ಯಕರಾವಳಿ

ಸುಳ್ಯ: ಆರೋಗ್ಯ ಇಲಾಖೆ ವತಿಯಿಂದ ಡೆಂಗ್ಯೂ ಕುರಿತು ಜಾಗೃತಿ‌ ಕಾರ್ಯಕ್ಕೆ ಚಾಲನೆ



ಸುಳ್ಯ: ಆರೋಗ್ಯ ಇಲಾಖೆ ವತಿಯಿಂದ ಡೆಂಗ್ಯೂ ಹರಡದಂತೆ ಜಾಗೃತಿ‌ ಮೂಡಿಸುವ ಕಾರ್ಯಕ್ಕೆ ಸುಳ್ಯದಲ್ಲಿ ಚಾಲನೆ ನೀಡಲಾಯಿತು. ತಾ.ಪಂ, ನ.ಪಂ. ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ಕೆ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ  ಚಾಲನೆ ನೀಡಿದರು.

ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ, ಡೆಂಗ್ಯೂ ಕುರಿತು ಜಾಗೃತಿ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ನಂತರ ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖಾ‌ ಹಾಸ್ಟೆಲ್, ವಾಣಿಜ್ಯ ಸಂಕೀರ್ಣಗಳಿಗೆ‌‌ ತೆರಳಿ ಜಾಗೃತಿ ಮೂಡಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಡೆಂಗ್ಯೂ ಬಗ್ಗೆ ಮಾಹಿತಿ ನೀಡಿದರು. ಸುಳ್ಯ ತಾ.ಪಂ. ಇ.ಒ. ರಾಜಣ್ಣ, ಗ್ರೇಡ್ 2 ತಹಶೀಲ್ದಾರ್ ಮಂಜುನಾಥ್, ನ.ಪಂ. ಮುಖ್ಯಾಧಿಕಾರಿ ಸುಧಾಕರ್, ಬಿಸಿಎಂ ಅಧಿಕಾರಿ ಗೀತಾ ಹಾಗೂ ವಿವಿಧ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಜೊತೆಗಿದ್ದರು.

Leave a Reply

Your email address will not be published. Required fields are marked *

error: Content is protected !!