ನನ್ನನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು: ಸಂಸದೆ ಕಂಗನಾ ರಣಾವತ್ ಹೇಳಿಕೆ
ನವದೆಹಲಿ: ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತೆಗೆದುಕೊಂಡು ಬರಬೇಕು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಚುನಾಯಿತರಾಗಿರುವ ಕಂಗನಾ ಅವರು ‘ನನ್ನ ಕ್ಷೇತ್ರದ ಜನರು ನನ್ನನ್ನು ಯಾವುದೇ ಕಾರಣಕ್ಕೆ ಭೇಟಿಯಾಗಲು ಬಯಸಿದರೆ ಅವರು ಆಧಾರ್ ಕಾರ್ಡ್ ತರಬೇಕು, ಏಕೆಂದರೆ ಅವರು ಮಂಡಿ ಸಂಸದೀಯ ಕ್ಷೇತ್ರದವರೇ ಅಥವಾ ಬೇರೆ ಜನರಿರಬಹುದಾ ಎಂಬುದು ತಿಳಿಯುತ್ತದೆ ಎಂದು ಕಂಗನಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ವಿರೋಧ ವ್ಯಕ್ತವಾಗಿದ್ದು ವಿವಾದಕ್ಕೂ ಕಾರಣವಾಗಿದೆ.