ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್ಯಾಲಿಯಲ್ಲಿ ಗುಂಡಿನ ದಾಳಿ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಅವರು ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ ಎಂದು ವರದಿಯಾಗಿದೆ. ಶನಿವಾರ ರಾತ್ರಿ ಪೆನ್ಸಿಲ್ವೇನಿಯಾದ ಬಟ್ಲರ್ ನಲ್ಲಿ ಈ ಘಟನೆ ನಡೆದಿದೆ. ಟ್ರಂಪ್ ಅವರ ಬಲ ಕಿವಿಯ ಮೇಲ್ಬಾದಿಂದ ಗುಂಡು ಹಾದು ಹೋಗಿದೆ ಎನ್ನಲಾಗಿದೆ. ಘಟನೆಯಲ್ಲಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೂಟರ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.