ನರಿಮೊಗರು: ಮರ ಬಿದ್ದು ನೆಲಕ್ಕುರುಳಿದ ವಿದ್ಯುತ್ ಕಂಬಗಳು

ಪುತ್ತೂರು: ನರಿಮೊಗರು ಜಂಕ್ಷನ್ ಬಳಿಯ ದೇವಸ್ಥಾನಕ್ಕೆ ಹೋಗುವ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ಜು.14ರಂದು ನಡೆದಿದೆ. ಘಟನೆ ಬಳಿಕ ಅರಣ್ಯ ಇಲಾಖೆಯವರು ಮತ್ತು ಮೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಮುಂದಿನ ಕಾರ್ಯ ಕೈಗೊಂಡಿದ್ದು ಮರವನ್ನು ತೆರವು ಮಾಡಲಾಗಿದೆ. ಘಟನೆಯಿಂದ ಮೆಸ್ಕಾಂಗೆ ಅಪಾರ ನಷ್ಟ ಸಂಭವಿಸಿದೆ. ನರಿಮೊಗರು ಮತ್ತು ಪಾಪೆತ್ತಡ್ಕದಲ್ಲಿ ಅನೇಕ ಮರಗಳು ರಸ್ತೆಗೆ ವಾಲಿಕೊಂಡಿದ್ದು ಅಪಾಯಕಾರಿ ಸ್ಥಿತಿಯಲ್ಲಿದ್ದು ತೆರವುಗೊಳಿಸುವಂತೆ ಆಗ್ರಹ ಕೇಳಿ ಬಂದಿದೆ.