ಬೆಂಗಳೂರು: ಸದ್ಯಕ್ಕೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.