ಸ್ನೇಹಿತರು ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿಹೋದ ಯುವಕ
ತುಂಬಿದ ನದಿಯಲ್ಲಿ ಈಜಲು ಹೋದ ವ್ಯಕ್ತಿಯೋರ್ವ ಸ್ನೇಹಿತರು ನೋಡುತ್ತಿದ್ದಂತೆಯೇ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ರತ್ನಗಿರಿ ನದಿಯಲ್ಲಿ ನಡೆದಿದೆ.

ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಿ ಸಾಹಸ ಪ್ರದರ್ಶಿಸಲು ಹೋದ ವ್ಯಕ್ತಿ ಸ್ನೇಹಿತರ ಎದುರೇ ನದಿಯಲ್ಲಿ ಕೊಚ್ಚಿ ಹೋಗಿದ್ದು ಆ ವೀಡಿಯೊ ವೈರಲ್ ಆಗಿದೆ. ಸ್ನೇಹಿತರು ಆತನನ್ನು ರಕ್ಷಿಸಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.