ಉಡುಪಿ: ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ ನಿಧನ
ಉಡುಪಿ: ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47ವ) ಅವರೂ ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಜು.16ರಂದು ನಿಧನ ಹೊಂದಿದ್ದಾರೆ.

ಇವರ ಪತಿ ರಮಾನಂದ ಶೆಟ್ಟಿ ಜು.15ರಂದು ಸಾವನ್ನಪ್ಪಿದ್ದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಅಶ್ವಿನಿ ಶೆಟ್ಟಿ ಅವರು ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯಕ್ರಿರಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಖ್ಯಾತಿ ಗಳಿಸಿದ್ದರು.
ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯಲ್ಲಿ ಸೋಮವಾರ ಮುಂಜಾನೆ ವೇಳೆ ಅಗ್ನಿ ಅವಘಡ ಸಂಭವಿಸಿತ್ತು. ಗಾಯಾಳುಗಳಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.