ರಾಜ್ಯ

ಅಂಕೋಲಾ: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿಕೊಂಡಿದ್ದ 6 ಜನರ ಮೃತದೇಹ ಪತ್ತೆ?





ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಕಾರವಾರ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 16ರಂದು ಸಂಭವಿಸಿದ ಗುಡ್ಡ ಕುಸಿತದಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿರುವ ಸಾಧ್ಯತೆಯಿದ್ದು, 6 ಜನರ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಇನ್ನುಳಿದವರ ಮೃತ ದೇಹಗಳಿಗಾಗಿ ಎನ್​ಡಿಆರ್​ಎಫ್​ ಶೋಧ ಕಾರ್ಯ ಮುಂದುವರೆಸಿದೆ ಎಂದು ತಿಳಿದು ಬಂದಿದೆ.

ಮಣ್ಣಿನಡಿ ಸಿಲುಕಿ ಮೃತಪಟ್ಟವರಲ್ಲಿ ಐವರು ಒಂದೇ ಕುಟುಂಬದ ಸದಸ್ಯರು ಎನ್ನಲಾಗುತ್ತಿದ್ದು ಇವರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಣ್ಣ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!