ಜಿಲ್ಲೆ

ಅಂಕೋಲಾ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ, ಮುಂದುವರಿದ ಕಾರ್ಯಾಚರಣೆ: ಮೃತಪಟ್ಟವರ ಕುಟುಂಬಕ್ಕೆ ತಲಾ ರೂ. 5 ಲಕ್ಷ ಪರಿಹಾರ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಇದು ಅತ್ಯಂತ ದುರದೃಷ್ಟಕರ ಘಟನೆ.
ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ರೂ. 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!