ಕರಾವಳಿ

ಶಾಲಾ ಕಾಲೇಜುಗಳಿಗೆ ರಜೆ ಎನ್ನುವ ನಕಲಿ ಆದೇಶ ಪ್ರತಿ ವೈರಲ್: ಕಾನೂನು ಕ್ರಮದ ಎಚ್ಚರಿಕೆ ನೀಡಿದ ಡಿ.ಸಿ

ಮಂಗಳೂರು: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಚ್ಚರಿಕೆ ನೀಡಿದ್ದಾರೆ.


ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ರವಾನಿಸಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!