ಕೌಡಿಚ್ಚಾರ್: ಮನೆಗೆ ಮರ ಬಿದ್ದು ಹಾನಿ- ಸ್ಥಳಕ್ಕೆ ತಹಶೀಲ್ದಾರ್ ಭೇಟಿ
ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೌಡಿಚ್ಚಾರು ಸಿ.ಆರ್.ಸಿ ಕಾಲೋನಿಯಲ್ಲಿ ವಾಸವಾಗಿರುವ ಅಮರಾವತಿ ಎಂಬವರ ಮನೆಗೆ ಗಾಳಿ ಮಳೆಗೆ ಇತ್ತೀಚೆಗೆ ಮರ ಬಿದ್ದು ಮನೆ ಭಾಗಶಃ ಹಾನಿಯಾಗಿದ್ದು ಸ್ಥಳಕ್ಕೆ ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಕೌಡಿಚ್ಚಾರ್, ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ, ರಫೀಕ್ ದರ್ಖಾಸ್, ವನರಾಜ, ನಾಗಮ್ಮ ಉಪಸ್ಥಿತರಿದ್ದರು.

ಪರಿಹಾರ ನೀಡಲು ಆಗ್ರಹ:
ಮನೆಗೆ ಮರ ಬಿದ್ದು ಬಡ ಕುಟುಂಬ ತೀವ್ರ ಸಮಸ್ಯೆಗೆ ಸಿಲುಕಿದ್ದು ಕುಟುಂಬಕ್ಕೆ ಗರಿಷ್ಠ ಪರಿಹಾರ ಮೊತ್ತ ನೀಡಬೇಕೆಂದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಹಶೀಲ್ದಾರ್ ಅವರಲ್ಲಿ ಮನವಿ ಮಾಡಿದರು. ಕಾನೂನಿನ ದೃಷ್ಟಿಯಲ್ಲಿ ಮಾತ್ರ ನೋಡದೆ ಮಾನವೀಯ ನೆಲೆಯಲ್ಲಿ ಕುಟುಂಬಕ್ಕೆ ನೆರವು ನೀಡಲು ಇಲಾಖೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದರು.