ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.