ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ
ವಿಟ್ಲ: ಸಿಡಿಲು ಬಡಿದು, ಮನೆ ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ ಸಮೀಪದ ಕೇಪು ಗ್ರಾಮದ ಚೆಲ್ಲಡ್ಕದಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮನೆಯ ಒಂದು ಬದಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಸ್ಥಳೀಯ ಯುವಕರು ಬೆಂಕಿ ನಂದಿಸಲು ಯತ್ನಿಸಿದ್ದು, ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಬೆಂಕಿ ನಂದಿಸಿದ್ದಾರೆ. ಈ ಅವಘಡದಿಂದಾಗಿ ಮನೆಗೆ ಹಾನಿಯಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ದಂಪತಿ ಸೇರಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.