ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿ ಮೂವರು ಮೃತ್ಯು
ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ದುರಂತದಲ್ಲಿ ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತ ದುರ್ದೈವಿಗಳು.
ವೃದ್ಧೆ ಯಲ್ಲಮ್ಮ, ಪುತ್ರ ಮುತ್ತು, ಸೊಸೆ ಸುನೀತಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಆರು ಜನರು ಮನೆಯಲ್ಲಿ ಒಂದೇ ಕಡೆ ಮಲಗಿದ್ದರು. ಜು.19ರಂದು ನಸುಕಿನ ಜಾವ ಜನರ ಮೇಲೆ ಗೋಡೆ ಬಿದ್ದಿದೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ.