ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲು; ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದನೆ
ಮಂಗಳೂರು: ಗುಡ್ಡ ಕುಸಿತದಿಂದಾಗಿ ಕರಾವಳಿ ಪ್ರದೇಶದಿಂದ ಬೆಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈರುತ್ಯ ರೈಲ್ವೆ ಕ್ರಮ ಕೈಗೊಂಡಿದೆ.
ಮಂಗಳೂರು-ಬೆಂಗಳೂರು ನಡುವೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮತ್ತು ಮೈಸೂರು ವಿಭಾಗದ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದರು.