ಕಣ್ಮರೆಯಾಗಿರುವ ಯುವಕನಿಗೆ ಸರ್ವೆ ಹೊಳೆಯಲ್ಲಿ ಕಾರ್ಯಾಚರಣೆ
ಪುತ್ತೂರು: ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡರ ಪುತ್ರ ಸನ್ಮಿತ್ ಕಣ್ಮರೆಯಾಗಿದ್ದು, ಸರ್ವೆ ಗೌರಿ ಸೇತುವೆ ಸಮೀಪ ಆತನ ದ್ವಿಚಕ್ರ ವಾಹನ ಪತ್ತೆಯಾಗಿದೆ. ದ್ವಿಚಕ್ರ ವಾಹನದಲ್ಲಿ ಪರ್ಸ್, ಮೊಬೈಲ್ ಪತ್ತೆಯಾಗಿದೆ. ಯುವಕ ಸರ್ವೆ ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಅಗ್ನಿ ಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸತತ ಕಾರ್ಯಾಚರಣೆ ನಡೆಯುತ್ತಿದ್ದರೂ ಮದ್ಯಾಹ್ನ ವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾನೆಯೇ ಎನ್ನುವ ಸಂಶಯವೂ ವ್ಯಕ್ತವಾಗಿದೆ.
ಪೊಲೀಸರು ಸ್ಥಳದಲ್ಲಿದ್ದು ಜನರನ್ನು ನಿಯಂತ್ರಿಸುತ್ತಿದ್ದಾರೆ.