ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಉಸ್ತಾದ್
ಮಂಗಳೂರು: ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಖಾಝಿ ಆಯ್ಕೆಗೆ ಸಂಬಂಧಿಸಿ ಉಳ್ಳಾಲ ದರ್ಗಾ ವಠಾರದ ಮದನಿ ಹಾಲಿನಲ್ಲಿ ರವಿವಾರ ಮಧ್ಯಾಹ್ನ ನಡೆದ ಮಹಾಸಭೆ ಯಲ್ಲಿ ಎ.ಪಿ. ಉಸ್ತಾದ್ ಅವರನ್ನು ಖಾಝಿಯಾಗಿ ನೇಮಕ ಮಾಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.