ರೇವಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಬೃಹತ್ ಸಮಾವೇಶ: ಕುಮಾರಸ್ವಾಮಿ
ಲೋಕಸಭೆ ಚುನಾವಣೆ ವೇಳೆ ಮತ್ತು ನಂತರ ಅದ ಬೆಳವಣಿಗೆ ಬಗ್ಗೆ ಕಾರ್ಯಕರ್ತರಲ್ಲಿ ನಿರಾಸೆ ಮೂಡಿದ್ದು, ಜಿಲ್ಲೆಯ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ನೈತಿಕ ಸ್ಥೆರ್ಯ ತುಂಬಲು ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕುಮಾರಣ್ಣ ಹಾಸನ ಜಿಲ್ಲೆಗೆ ಬರಬೇಕೆಂದು ಕಾರ್ಯಕರ್ತರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಲಾಪ ಮುಗಿದ ನಂತರ ಹಾಸನದಲ್ಲಿ ರೇವಣ್ಣ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡಲು ಯೋಚಿಸಿದ್ದೇನೆ. ಕಳೆದ ಲೋಕಸಭಾ ಚುನಾವಣೆ ನಂತರ ಪ್ರಥಮ ಬಾರಿಗೆ ಹಾಸನ ಜಿಲ್ಲೆಯಲ್ಲಿ ಆಗಿರುವ ಅನಾಹುತ ನೋಡಲು ಬಂದಿದ್ದೇನೆ. ಚುನಾವಣೆ ಫಲಿತಾಂಶ ನಂತರ, ಚುನಾವಣೆ ಆಸುಪಾಸಿನಲ್ಲಿ ಕೆಲವು ಅಹಿತರಕರ ಘಟನೆಗಳು ಪಕ್ಷದ ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ನಿರಾಸೆ ಮೂಡಿಸಿವೆ ಎಂದು ಹೇಳಿದರು.