ಅಂಕೋಲಾ: ಮಣ್ಣಿನಡಿಯಿಂದ ಮಹಿಳೆಯ ಶವ ಪತ್ತೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು ಸತತ ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ.

ನಿರಂತರ ಮಳೆ ಮತ್ತು ಪದೇ ಪದೇ ನೆಲಕ್ಕುರುಳುತ್ತಿರುವ ಗುಡ್ಡದ ಮಣ್ಣುಗಳ ನಡುವೆಯೂ ರಕ್ಷಣಾ ತಂಡ ಜೀವ ಪಣಕ್ಕಿಟ್ಟು ಕಾರ್ಯಾಚರಣೆ ನಡೆಸುತ್ತಿದೆ. ಈಗ ಮಹಿಳೆಯ ಶವ ಮಣ್ಣಿನಡಿ ಸಿಕ್ಕಿದೆ. ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಶೋಧ ಕಾರ್ಯ ಮುಂದುವರಿದಿದೆ.